ಲೈಪ್ಜಿಗ್ (ಜರ್ಮನಿ) ಪ್ರವಾಸ ಕಥನ-೧
ಫ್ರೆಂಚ್ ಚಕ್ರವರ್ತಿ ನೆಪೋಲಿಯನ್ ಬೋನಾಪಾರ್ಟೆ, ಸೋಲಿಲ್ಲದ ಸರದಾರ ಎನ್ನುವ ಖ್ಯಾತಿ ಹೊಂದಿದ್ದ.
1804 ರಿಂದ 1814 ರವರೆಗೆ ಫ್ರಾನ್ಸ್ ನ ಚಕ್ರವರ್ತಿಯಾಗಿದ್ದ, ಅವನು ಯೂರೋಪಿನ ಇತಿಹಾಸದಲ್ಲಿ ವಿಶಿಷ್ಟಸ್ಥಾನ ಪಡೆದ ಮಹಾವೀರ. ತನ್ನ ಅಧಿಕಾರಾವಧಿಯಲ್ಲಿ ಅನೇಕ ಯುದ್ಧಗಳನ್ನು ಮಾಡಿ ಯಶಸ್ವಿಯಾಗಿದ್ದರಿಂದ, ಹಾಗೂ ಫ್ರೆಂಚ್ ನಲ್ಲಿನ ಕ್ರಾಂತಿಕಾರಕ ಬದಲಾವಣೆಗಳಿಗೆ ಕಾರಣಿಭೂತನಾಗಿದ್ದ ಅವನು ಫ್ರಾನ್ಸ್ನ ಇತಿಹಾಸದಲ್ಲಿ ಅಧಿಪತಿಯಾಗಿ ತುಂಬಾ ಹೆಸರು ಗಳಿಸಿದ್ದ.
ಅಂತಹ ಚಕ್ರವರ್ತಿ ನೆಪೋಲಿಯನ್ನಿಗೆ ಇಡೀ ಜಗತ್ತನ್ನೇ ಗೆಲ್ಲಬೇಕೆಂಬ ಆಸೆಯಿತ್ತು. ಯುರೋಪ್ ರಾಷ್ಟ್ರಗಳನ್ನು ಹಲವಾರು ಯುದ್ದದಲ್ಲಿ ಗೆದ್ದು ಚಕ್ರವರ್ತಿ ಯಾಗಿ ಬೀಗಿದ್ದ. ಆದರೆ, ಸೋಲು ಎನ್ನುವುದು ಅವನಿಗೂ ತಪ್ಪಿರಲಿಲ್ಲ. ಜರ್ಮನ್, ರಷಿಯನ್ಸ್, ಸ್ವೀಡನ್, ಆಸ್ಟ್ರಿಯನ್ಸ್ ರ ಎದುರು 1813 ರಲ್ಲಿ ನಡೆದ ಮಹಾಯುದ್ದ ದಲ್ಲಿ (Battle of Leipzig) ಅವನು ಸೋತು ಶರಣಾಗಿದ್ದ.
ಪ್ರಪಂಚ ಗೆಲ್ಲಬೇಕೆನ್ನುವ ನೆಪೋಲಿಯನ್ ಆಸೆ ಪೂರ್ಣವಾಗಲು, ಒಂದು ಯುದ್ಧ ತಡೆಯಾಯಿತು. ಅದು ಜರ್ಮನ್ ದೇಶದ ಲೈಪ್ಜಿಗ್ ನಲ್ಲಿ ನಡೆದ ಮಹಾಯುದ್ದ. ನೆಪೋಲಿಯನ್ ಯುದ್ದ ದಾಹದಿಂದ ತೊಂದರೆಗೀಡಾಗಿದ್ದ ಜರ್ಮನ್ ಮತ್ತು ಸುತ್ತ ಮುತ್ತಲಿನ ದೇಶಗಳು ಒಂದಾಗಿ ಫ್ರೆಂಚ್ ರ ವಿರುದ್ದ ಸೆಣೆಸಿದ್ದವು.
ನೆಪೋಲಿಯನ್ ನ ಮೊದಲನೇ ಸೋಲನ್ನು ನೋಡಿ ಅವನನ್ನು ಎಲ್ಬಾ ಎನ್ನುವ ದ್ವೀಪಕ್ಕೆ ಗಡಿಪಾರು ಮಾಡಲಾಯಿತು.
ಜರ್ಮನ್ ಮತ್ತು ಸಹರಾಷ್ಟ್ರಗಳು ನೆಪೋಲಿಯನ್ ವಿರುದ್ದ ಯುದ್ದ ಗೆದ್ದ ನೆನಪಿಗಾಗಿ ಸ್ಮಾರಕ ವೊಂದನ್ನು ಜರ್ಮನ್ ದೇಶದ ಲೈಪ್ಜಿಗ್ ನಗರದಲ್ಲಿ ನಿರ್ಮಿಸಿದ್ದಾರೆ. ಕೆಲ ದಿನಗಳ ಹಿಂದೆ ಜರ್ಮನಿಗೆ ಭೇಟಿ ನೀಡಿದಾಗ ಈ ಪ್ರದೇಶಕ್ಕೆ ಹೋಗಿ ಬಂದದ್ದು.
ಯುದ್ದದಲ್ಲಿ ಗೆದ್ದ ನೆನಪಿಗಾಗಿ ನೂರು ವರ್ಷಗಳ ನಂತರ, ತುಂಬ ವಿಶಾಲವಾದ ಜಾಗದಲ್ಲಿ ಈ ಸ್ಮಾರಕ ನಿರ್ಮಾಣವಾಗಿದೆ. ಉದ್ದ 80 metres (260 ft), ಅಗಲ, 70 metres (230 ft), ಎತ್ತರ 91 metres (299 ft). 18 October 1898 ರಂದು ಕಟ್ಟಲು ಶುರುಮಾಡಿ, ಹನ್ನೆರೆಡು ವರ್ಷಗಳಲ್ಲಿ ಸ್ಮಾರಕ ಪೂರ್ಣಗೊಂಡು 18 October 1913 ರಂದು ಉದ್ಘಾಟನೆ ಗೊಂಡಿತು.

Landmarkpallavaa - Stay at one of the Beach View or Sea View Resorts in ECR, Mahabalipuram. Book through website to get best offers on your stay. Book Now, Pay Later &party hard at beach!
ಪ್ರತ್ಯುತ್ತರಅಳಿಸಿBeach View Resorts in ECR